ರಾಯಚೂರು, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ರಾಯಚೂರ ಜಿಲ್ಲಾ ಪ್ರವಾಸದ ವೇಳೆಯಲ್ಲಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮೊದಲಿಗೆ ಕಚೇರಿಯ ಸಿಬ್ಬಂದಿಯ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಸುಧೀರ್ಘ ರಜೆ ಇರುವವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.
ಎಲ್ಲ ಸಿಬ್ಬಂದಿಯು ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ಕಚೇರಿಯಲ್ಲಿ ಬಯೋಮೆಟ್ರಿಕ್ ಕಡ್ಡಾಯ ಬಳಸಬೇಕು. ಇದು ಪ್ರತಿ ದಿನ ಪಾಲನೆಯಾಗಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.
ಕೆಲ ಸಿಬ್ಬಂದಿಯ ಬ್ಯಾಂಕು ವಾಹಿವಾಟಿನ ವಿವರವನ್ನು ಇದೆ ವೇಳೆ ಲೋಕಾಯುಕ್ತರು ಪರಿಶೀಲಿಸಿದರು. ತಹಸೀಲ್ದಾರ್ ಕಚೇರಿಯಲ್ಲಿ ಬಾಕಿ ಇರುವ ಕೆಲವು ಕಡತಗಳನ್ನು ಬೇಗನೆ ವಿಲೇವಾರಿ ಮಾಡಬೇಕು. ಕಚೇರಿ ವ್ಯಾಪ್ತಿಯ ರೈತರು ಕೇಳಿರುವ ಮಾಹಿತಿಯನ್ನು ನಿಗಧಿತ ಸಮಯದಲ್ಲಿ ಅವರಿಗೆ ನೀಡಬೇಕು. ಒಂದು ವೇಳೆ ನಿರ್ಲಕ್ಷ್ಯ ಮಾಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉಪ ಲೋಕಾಯುಕ್ತರು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್