ವಿಜಯಪುರ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕು. ಅದಕ್ಕಾಗಿ ನಾಳೆ ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10.30 ವಿಜಯಪುರ ನಗರದ ಗಾಂಧಿ ಸರ್ಕಲ್‌ಗೆ ಬನ್ನಿ ಎಂದರು.
ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಧ್ಯೇಯದೊಂದಿಗೆ ಧರ್ಮರಕ್ಷಣೆಯ ಪಣ ತೊಡೋಣ. ಅದಕ್ಕಾಗಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande