ನವದೆಹಲಿ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ರೈಲ್ವೆ ಮಂಡಳಿಯ ಅಧ್ಯಕ್ಷ ಹಾಗೂ ಸಿಇಒ ಸತೀಶ್ ಕುಮಾರ್ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಆದೇಶ ಪ್ರಕಾರ, ಸಂಪುಟದ ನೇಮಕಾತಿ ಸಮಿತಿ ಅನುಮೋದನೆಯ ಮೇರೆಗೆ, ಸೆಪ್ಟೆಂಬರ್ 01, 2025ರಿಂದ ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಸತೀಶ್ ಕುಮಾರ್ ಪ್ರಸ್ತುತ ರೈಲ್ವೆ ಮಂಡಳಿಯ ಅಧ್ಯಕ್ಷರು ಮತ್ತು ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa