ಶಿವಮೊಗ್ಗದಲ್ಲಿ ಭಾರಿ ಮಳೆ ; ಶಾಲೆಗಳಿಗೆ ರಜೆ
ಶಿವಮೊಗ್ಗ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯದ ಮಲೆನಾಡು ಭಾಗ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪ
ಶಿವಮೊಗ್ಗದಲ್ಲಿ ಭಾರಿ ಮಳೆ ; ಶಾಲೆಗಳಿಗೆ ರಜೆ


ಶಿವಮೊಗ್ಗ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯದ ಮಲೆನಾಡು ಭಾಗ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ಆದರೆ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ತಾಲೂಕಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande