ಬಂಡಿಪೋರಾ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ ನಡೆದ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ಮತ್ತು ಪೊಲೀಸರು ವಿಫಲಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.
ಜಮ್ಮು-ಕಾಶ್ಮೀರ ಪೊಲೀಸರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆ ಹಾಗೂ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿದರು. ಗಡಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ ಸೈನಿಕರು ಒಳನುಗ್ಗುವವರನ್ನು ಪ್ರಶ್ನಿಸಿದಾಗ, ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು.
ಪ್ರತಿದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು. ಪ್ರಸ್ತುತ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa