ಕೊಪ್ಪಳ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸಂಜೀವಿನಿ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಬರುವ ಪ್ರಧಾನ ಮಂತ್ರಿ ವನಧನ ವಿಕಾಸ ಕೇಂದ್ರದಡಿ ಕವಲೂರು ಗ್ರಾಮದಲ್ಲಿ ಪ್ರಾರಂಭಿಸಿದ ದಾಲ್ ಮಿಲ್ ಘಟಕವನ್ನು ಮಂಗಳವಾರದಂದು ಕವಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಮ್ಮ ಬಿಸರಹಳ್ಳಿ ರಿಬ್ಬನ್ ಕಟ್ ಮಾಡುವ ಮೂಲಕ ವನಧನ ವಿಕಾಸ ಕೇಂದ್ರದ ದಾಲ್ ಮಿಲ್ ಘಟಕಕ್ಕೆ ಚಾಲನೆ ನೀಡಿದರು.
ಕೊಪ್ಪಳ ತಾಲೂಕ ಪಂಚಾಯಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಂಜೀವಿನಿ- ಎನ್‌ಆರ್‌ಎಲ್‌ಎಂ ಯೋಜನೆಯು ತುಂಬಾ ಸಹಕಾರಿಯಾಗಿದೆ. ಪ್ರಧಾನ ಮಂತ್ರಿ ವನಧನ ವಿಕಾಸ ಕೇಂದ್ರದಡಿ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ದಾಲ್ ಮಿಲ್ ಘಟಕವನ್ನು ಪ್ರಾರಂಭಿಸಿದ್ದು, ಕೃಷಿ ಉತ್ಪನ್ನವನ್ನು ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಗೆ ಸರಬರಾಜು ಮಾಡುವುದು ಯೋಜನೆಯ ಉದ್ದೇಶವಾಗಿದ್ದು ಇದನ್ನು ಸರಿಯಾಗಿ ಮುನ್ನಡೆಸಿಕೊಂಡು ಹೋಗಿ, ಉತ್ತಮ ಗುಣಮಟ್ಟದ ತೊಗರಿ ಬೇಳೆ, ಹೆಸರು ಬೇಳೆ, ಕಡ್ಲೆ ಬೇಳೆ ತಯಾರು ಮಾಡಿ ಮಾರುಕಟ್ಟೆಗೆ ಪೂರೈಕೆ ಮಾಡುವಂತೆ ಕರೆ ನೀಡಿದರು.
ಇದರಿಂದ ಸಂಘದ ಮಹಿಳೆಯರು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ. ಈ ಯೋಜನೆಯನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕ ಸಬಲರಾಗುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅನ್ನಪೂರ್ಣ ಪೂಜಾರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಅನಿತಾ ಕಿಲ್ಲೇದ್, ಕಾರ್ಯದರ್ಶಿ ನೀಲಮ್ಮ, ಸಂಜೀವಿನಿ ಯೋಜನೆಯ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್, ಯುವ ವೃತ್ತಿಪರ ಮಂಜುನಾಥ, ಶರಣಪ್ಪ, ಕಲ್ಪವೃಕ್ಷ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ರೇಣುಕಾ ಜೋಗಿನ್, ಉಪಾಧ್ಯಕ್ಷರಾದ ಗೀತಾ, ಕಾರ್ಯದರ್ಶಿ ಹುಸೇನ್ ಬೀ, ಒಕ್ಕೂಟದ ಸರ್ವ ಸದಸ್ಯರು, ಒಕ್ಕೂಟದ ಸಿಬ್ಬಂದಿಗಳು ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್