ಜಪಾನ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರವಾಸ
ನವದೆಹಲಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಜಪಾನ್‌ಗೆ ತೆರಳಲಿದ್ದು, 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದು ಪ್ರಧಾನಿಯಾಗಿ ಅವರ ಎಂಟನೇ ಜಪಾನ್ ಭೇಟಿಯಾಗಿದೆ. ಆಗಸ್ಟ್ 29–30 ರಂದು ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿ
Pm


ನವದೆಹಲಿ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಜಪಾನ್‌ಗೆ ತೆರಳಲಿದ್ದು, 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದು ಪ್ರಧಾನಿಯಾಗಿ ಅವರ ಎಂಟನೇ ಜಪಾನ್ ಭೇಟಿಯಾಗಿದೆ.

ಆಗಸ್ಟ್ 29–30 ರಂದು ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಗೇರು ಇಶಿಬಾ ರಕ್ಷಣಾ–ಭದ್ರತೆ, ವ್ಯಾಪಾರ–ಆರ್ಥಿಕತೆ, ತಂತ್ರಜ್ಞಾನ–ನವೀನತೆ ಸೇರಿದಂತೆ ವಿಶೇಷ ಕಾರ್ಯತಂತ್ರ ಹಾಗೂ ಜಾಗತಿಕ ಪಾಲುದಾರಿಕೆ ವಿಚಾರಗಳ ಕುರಿತು ಮಾತುಕತೆ ನಡೆಸಲಿದ್ದು, ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಮೇಲೂ ಚರ್ಚೆ ನಡೆಯಲಿದೆ.

ಜಪಾನ್ ಭೇಟಿಯ ನಂತರ ಮೋದಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಚೀನಾದ ಟಿಯಾಂಜಿನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಮಂಡಳಿ ರಾಷ್ಟ್ರಗಳ ಮುಖ್ಯಸ್ಥರ 25ನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೆಲವು ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸುವ ನಿರೀಕ್ಷೆಯಿದೆ.

ಶಾಂಘೈ ಸಹಕಾರ ಮಂಡಳಿಯ 10 ಸದಸ್ಯ ರಾಷ್ಟ್ರಗಳಲ್ಲಿ ಭಾರತ, ಬೆಲಾರಸ್, ಚೀನಾ, ಇರಾನ್, ಕಝಾಕಿಸ್ತಾನ್, ಕಿರ್ಗಿಸ್ತಾನ್, ಪಾಕಿಸ್ತಾನ, ರಷ್ಯಾ, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಸೇರಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande