ಬೆಂಗಳೂರು, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತ ಇರುವ ಪ್ರಗತಿಪರರು ಧರ್ಮಸ್ಥಳ ದೇವಾಲಯವನ್ನು ಕಿತ್ತುಕೊಂಡು ಲೂಟಿ ಹೊಡೆಯಲು ಯೋಜನೆ ರೂಪಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಹಿಂದೆ ಘಜನಿ ಮಾಡಿದಂತೆಯೇ ಕಾಂಗ್ರೆಸ್ ಸರ್ಕಾರ ಲೂಟಿ ಮಾಡಲು ಮುಂದಾಗಿದೆ. ಮಂಜುನಾಥ ಸ್ವಾಮಿಗೆ ಕೆಟ್ಟ ಹೆಸರು ತರಲು ಎರಡು ವರ್ಷ ತಯಾರಿ ನಡೆಸಲಾಗಿದೆ. ಎಸ್ಐಟಿಗೆ 3-5 ಕೋಟಿ ರೂ. ಖರ್ಚಾಗಿದೆ. ಧರ್ಮವನ್ನು ರಕ್ಷಣೆ ಮಾಡಲು ಸೆಪ್ಟೆಂಬರ್ 1 ರಂದು ಧರ್ಮ ರಕ್ಷಣಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಶೋಕ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa