ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಕ್ರೀಡೆಗಳ ಆಯೋಜನೆ
ಗದಗ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರುಗಳ ಸಹಯೋಗದಲ್ಲಿ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಯನ್ನು ಅಗಸ್ಟ 29 ರಂದು ಬೆಳಿಗ್ಗೆ 10 ಗಂಟೆಗೆ ಗದಗ ಬೆಟಗೇರಿಯ ಮಹಾತ್ಮಾ ಗಾಂಧಿ ಹಾ
ಫೋಟೋ


ಗದಗ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರುಗಳ ಸಹಯೋಗದಲ್ಲಿ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಯನ್ನು ಅಗಸ್ಟ 29 ರಂದು ಬೆಳಿಗ್ಗೆ 10 ಗಂಟೆಗೆ ಗದಗ ಬೆಟಗೇರಿಯ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ , ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ -ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ , ಯೋಜನೆ ಕಾರ್ಯಕ್ರಮ , ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್ ಆಗಮಿಸುವರು.

ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಪಂದ್ಯಾವಳಿಗಳ ವಿವರ:

ಹಾಕಿ ಪಂದ್ಯಾವಳಿ: ದಿ: 29-8-2025 ರಂದು ಬೆಳಿಗ್ಗೆ 10 ಗಂಟೆಗೆ ಗದಗ ಬೆಟಗೇರಿಯ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣ ( ನಾಲ್ಕು ತಂಡಗಳಿAದ ಮೂರು ಪಂದ್ಯಗಳು).

ಕುಸ್ತಿ ಪಂದ್ಯಾವಳಿ: ದಿ: 30-8-2025 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಕುಸ್ತಿ ಮನೆ.

ಸೈಕ್ಲಿಂಗ್ ಜಾಥಾ: ದಿ: 31-8-2025 ರಂದು ಬೆಳಿಗ್ಗೆ 7 ಗಂಟೆಗೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಿಂದ ಶ್ರೀ ಬಸವೇಶ್ವರ ಮೂರ್ತಿಯವರೆಗೆ .

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande