ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಅಂಚೆ ಇಲಾಖೆವತಿಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ ಯೋಜನೆಯಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇ.50
ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


ದಾವಣಗೆರೆ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅಂಚೆ ಇಲಾಖೆವತಿಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ ಯೋಜನೆಯಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇ.50 ರಷ್ಟು ಅಂಕವನ್ನು ಗಳಿಸಿರಬೇಕು. ಕಡ್ಡಾಯವಾಗಿ ಮಕ್ಕಳು ಅಂಚೆ ಚೀಟಿ ಠೇವಣಿ ಖಾತೆಯನ್ನು ಅಥವಾ ಅಂಚೆ ಚೀಟಿ ಕ್ಲಬ್‍ನ ಸದಸ್ಯರಾಗಿರಬೇಕು. ಅಂಚೆ ಚೀಟಿ ಬಹುಆಯ್ಕೆ ಲಿಖಿತ ಪರೀಕ್ಷೆ ಮತ್ತು ಅಂಚೆ ಚೀಟಿ ಸಂಗ್ರಹ ಪ್ರಾಜೆಕ್ಟ್‍ನ ಆಧಾರದ ಮೇಲೆ ವಿಧ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ರೂಪಾಯಿ 6000/- ವಿದ್ಯಾರ್ಥಿವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿದೆ. ದಾವಣಗೆರೆ ಶೈಕ್ಷಣಿಕ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಮತ್ತು ಶಾಲೆಗಳು ಮೊ.ನಂ 8861126883 ಅಥವಾ ವೆಬ್ ಸೈಟ್ www.indiapost.gov. ಅಥವಾ www.karnatakapost.gov. ವೀಕ್ಷಿಸಬಹುದು ಎಂದು ದಾವಣಗೆರೆ ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande