ಬೀದರ್, 29 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೀದರ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಹಾನಿ, ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಬೀದರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತುರ್ತು ಸಭೆ ನಡೆಸಿದರು.
ಈ ಸಂದರ್ಭದಲ್ಲಿ ರೈತರ ಬೆಳೆ ಹಾನಿ, ಮನೆ ಕುಸಿತ, ರಸ್ತೆ ಸಂಪರ್ಕ ವ್ಯತ್ಯಯ ಸೇರಿದಂತೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ತ್ವರಿತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಹಾಗೂ ಪೀಡಿತ ಕುಟುಂಬಗಳಿಗೆ ತಕ್ಷಣದ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa