ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ಬದ್ಧ : ಡಿ.ಕೆ.ಶಿವಕುಮಾರ್
ಬೆಂಗಳೂರು, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಮಾಗಡಿ ಪಟ್ಟಣದಲ್ಲಿ ನಾನಾ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಗಡಿಯಲ್ಲಿ ಕೆಂಪೇಗೌಡರು ನಿರ್ಮಿಸಿದ ಐತಿಹಾಸಿಕ ಕೋಟೆ, ಸೋಮೇಶ್ವರ ದೇವಾಲಯ, ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿ
Dks


ಬೆಂಗಳೂರು, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮಾಗಡಿ ಪಟ್ಟಣದಲ್ಲಿ ನಾನಾ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಗಡಿಯಲ್ಲಿ ಕೆಂಪೇಗೌಡರು ನಿರ್ಮಿಸಿದ ಐತಿಹಾಸಿಕ ಕೋಟೆ, ಸೋಮೇಶ್ವರ ದೇವಾಲಯ, ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದರು.

ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಐತಿಹಾಸಿಕ ಮಾಗಡಿ ಕೋಟೆಯ ಹಳೆಯ ವೈಭವವನ್ನು ಹಿಂದಿರುಗಿಸಲು ಮತ್ತು ಸಂರಕ್ಷಿಸಲು ಕೋಟೆಯ ಪುನರುಜ್ಜೀವನ ಕಾರ್ಯಕ್ಕಾಗಿ 103 ಕೋಟಿ ರೂ. ಅನುದಾನವನ್ನು ಬೆಂಗಳೂರು ನಗರದಿಂದ ನೀಡಿದ್ದೇನೆ. ಬೆಂಗಳೂರಿನ ಸುಮನಹಳ್ಳಿಯಲ್ಲಿ 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಈ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಚರ್ಚಿಸಿದ್ದಾರೆ ಎಂದರು.

ಸರ್ಕಾರದ ವತಿಯಿಂದ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ. ಮಾಗಡಿಯಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವುದು ಹಲವು ದಿನಗಳ ಬೇಡಿಕೆಯಾಗಿತ್ತು. 41 ಕೋಟಿ ರೂ. ವೆಚ್ಚದಲ್ಲಿ, ಎರಡು ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ. ಸಾರಿಗೆ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರು, ಬಸ್‌ ನಿಲ್ದಾಣ ಹಾಗೂ ಡಿಪೋ ನಿರ್ಮಾಣ ಮಾಡಿಕೊಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ತಿಳಿಸಿದರು.

20 ಕೋಟಿ ರೂ. ವೆಚ್ಚದಲ್ಲಿ ಮಾಗಡಿಯ ಗೌರಮ್ಮನ ಕೆರೆ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದೇವೆ. 1200 ಜನರಿಗೆ 'ಇ -ಸ್ವತ್ತು' ವಿತರಿಸಲಾಗಿದೆ. ಇನ್ನುಳಿದವರಿಗೆ ಶೀಘ್ರದಲ್ಲಿ ವಿತರಿಸಲು ಸಿದ್ಧತೆ ನಡೆಸಲಾಗಿದೆ. 13 ಕೋಟಿ ವೆಚ್ಚದಲ್ಲಿ ಮಂಚನಬೆಲೆ ಬಳಿ ಹಲವು ಅಭಿವೃದ್ಧಿ ಕೆಲಸಗಳನ್ನು ಆರಂಭಿಸುತ್ತಿದ್ದು, 90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಾಗಡಿಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿರುವುದಾಗಿ ಶಿವಕುಮಾರ್ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande