ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ದಾವಣಗೆರೆ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 1 ಮತ್ತು 2 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ತಾಲ್ಲೂಕ
ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ


ದಾವಣಗೆರೆ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 1 ಮತ್ತು 2 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಬಹುದು.

ಭಾಗವಹಿಸುವ ಕ್ರೀಡಾಪಟುಗಳು ಆನ್‍ಲೈನ್ ಮುಖಾಂತರ http://dasaracmcup-2025.etrpindia.com/KA-sports ನಲ್ಲಿ ಸೆ.1 ರಂದು 9 ಗಂಟೆಯ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande