ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು : ಶಾಸಕ ಎಸ್.ಎನ್. ಚನ್ನಬಸಪ್ಪ
ಶಿವಮೊಗ್ಗ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಜೀವನದಲ್ಲಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ದೇಶದ ಸದೃಢ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕರ ಎಸ್.ಎನ್. ಚನ್ನಬಸಪ್ಪ ಅವರು ಕರೆ ನೀಡಿದರು. ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂ
Sports day


ಶಿವಮೊಗ್ಗ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜೀವನದಲ್ಲಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ದೇಶದ ಸದೃಢ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕರ ಎಸ್.ಎನ್. ಚನ್ನಬಸಪ್ಪ ಅವರು ಕರೆ ನೀಡಿದರು.

ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧ್ಯಾನ್‌ಚಂದ್ ಹಾಕಿ ಆಟಕ್ಕೆ ಶಕ್ತಿ ತುಂಬಿದ ದಂತಕಥೆ ಎಂದರು. ಕ್ರೀಡೆ ವೈಯಕ್ತಿಕ ಆಟ ಮಾತ್ರವಲ್ಲ, ತಂಡದ ಮನೋಭಾವ ಬೆಳೆಸುವ ವೇದಿಕೆ. ಒಗ್ಗಟ್ಟಿನಿಂದ ಮಾತ್ರ ಗೆಲುವು ಸಾಧ್ಯ, ಯುವಕರು ದೇಶಕ್ಕೆ ಕೀರ್ತಿ ತರುವ ಕ್ರೀಡಾಪಟುಗಳಾಗಬೇಕು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande