ವಿಜಯಪುರ, 29 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಜಮಾದಾರ್ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಫೋಟಗೊಂಡ ಘಟನಾ ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.
ಘಟನೆಯ ಬಗ್ಗೆ ಸ್ಥಳೀಯ ಪೊಲೀಸ ಠಾಣೆಯ ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಈ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡ ಗಾಯಾಳು ದಾಖಲಾಗಿದ್ದ ಆಸ್ಪತ್ರೆಗೂ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande