ಬೆಂಗಳೂರು, 29 ಆಗಸ್ಟ್ (ಹಿ.ಸ.) :
ಆ್ಯಂಕರ್ : ಭೀಕರ ನೆರೆಗೆ ಉತ್ತರ ಕರ್ನಾಟಕ ಭಾಗದ ರೈತರು, ಜನರ ಬದುಕು ಕೊಚ್ಚಿ ಹೋಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತ್ರಸ್ತರ ನೆರವಿಗೆ ಧಾವಿಸದೆ ಚುನಾವಣೆ ಪ್ರಚಾರಕ್ಕಾಗಿ ಬಿಹಾರ್‌ಗೆ ತೆರಳಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಹತ್ತಿ, ಹೆಸರು, ಶೇಂಗಾ, ಮೆಕ್ಕೆಜೋಳ, ಕಬ್ಬು ಸೇರಿ ಇತರ ಬೆಳೆ ಹಾಳಾಗಿವೆ. ಎಕರೆಗೆ ಸಾವಿರಾರು ರೂ. ಖರ್ಚು ಮಾಡಿ ಬೆಳೆದ ಬೆಳೆ ನಿಂತ ನೀರಲ್ಲೇ ಕೊಳೆತು ಹೋಗಿದೆ. ಇದರಿಂದ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಅನ್ನದಾತರು ಸಂಕಷ್ಟಕ್ಕೆ ಒಳಗಾಗಿದ್ದರೂ ಕಟುಕ ಕಾಂಗ್ರೆಸ್ ಸರ್ಕಾರ ಮಾತ್ರ ಪರಿಹಾರ ವಿತರಿಸದೆ ಬೀದಿಗೆ ತಳ್ಳಿದೆ.
ಮನೆಗೆ ಮಾರಿಯಾಗಿರುವ ಸಿದ್ದರಾಮಯ್ಯನವರೇ, ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೋವಿಗಿಂತ, ತಮಗೆ ಚುನಾವಣೆ ಪ್ರಚಾರವೇ ಹೆಚ್ಚಾಯಿತೇ? ನೊಂದವರ ಸಂಕಷ್ಟಕ್ಕೆ ಮಿಡಿಯದಷ್ಟು ಹೃದಯಹೀನವಾಯಿತೇ.? ಕೂಡಲೇ, ಬೆಳೆನಷ್ಟ ಸಮೀಕ್ಷೆ ನಡೆಸಿ, ಪರಿಹಾರ ವಿತರಿಸಿ ಎಂದು ಬಿಜೆಪಿ ಆಗ್ರಹಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa