ಮೇಜರ್ ಧ್ಯಾನಚಂದ ಸಾಧನೆ ಎಲ್ಲರಿಗೂ ಸ್ಪೂರ್ತಿ
ವಿಜಯಪುರ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ. ಇಂದು ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ
ಹಾಕಿ


ವಿಜಯಪುರ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.

ಇಂದು ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ. ಓಲಂಪಿಕ್ಸ್ ಹಾಕಿಯಲ್ಲಿ ಭಾರತಕ್ಕೆ ಮೂರು ಚಿನ್ನದ ಪದಕ ಒಲಿಯಲು ಹಾಕಿ ಜಗತ್ತಿನ ಮಾಂತ್ರಿಕ ಧ್ಯಾನಚಂದ ಅವರು ಕಾರಣರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಡಾ. ಶೈಲಜಾ ಪಾಟೀಲ ಮಾತನಾಡಿ, ಸಕ್ಕರೆಯನ್ನು ಮಿತವಾಗಿ ಬಳಸಿ, ಬೇಕರಿ ತಿನಿಸುಗಳಿಂದ ದೂರವಿರಬೇಕು. ಹಣ್ಣು, ತರಕಾರಿಯನ್ನು ಹೆಚ್ಚಾಗಿ ಸೇವಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದು ಹೇಳಿದರು.

ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಜಾಥಾವನ್ನು ಎಸ್. ಎಸ್. ಕೋರಿ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯ ಡಾ. ಶೈಲಜಾ ಪಾಟೀಲ ಉದ್ಘಾಟಿಸಿದರು. ಈ ಜಾಥಾದಲ್ಲಿ ಶಾಲೆಯ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧುಮೇಹ ಜಾಗೃತಿ ಬಾನರ್ ಹಿಡಿದು ಶಿಸ್ತಿನಿಂದ ಬೀದಿಗಳಲ್ಲಿ ಘೋಷಣೆ ಹಾಕುತ್ತ ಸಾಗಿದರು. ಅಲ್ಲದೇ, ಅಲ್ಲಲ್ಲಿ ಬೀದಿನಾಟಕ ಪ್ರದರ್ಶಿಸಿದರು. ಗಾಂಧಿಚೌಕ, ಶಿವಾಜಿಚೌಕ, ವಾಟರ್ ಟ್ಯಾಂಕ್ ಮೂಲಕ ಸಂಚರಿಸಿದ ಜಾಥಾ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ವಿಭಾಗದ ಸಹ ನಿರ್ದೇಶಕ ಕೈಲಾಸ ಹಿರೇಮಠ, ಸಂಸ್ಥೆಯ ಆಡಳಿತಾಧಿಕಾರಿ ವಿಲಾಸ ಬಗಲಿ, ಸಿಬಿಎಸ್‌ಇ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ ನಾಯರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸದಸ್ಯ ದಾಕ್ಷಾಯಣಿ ಬಿರಾದಾರ, ಮಂಜುಳಾ ಹಜೇರಿ, ದೈಹಿಕ ಶಿಕ್ಷಕ ಸ್ಯಾಮನ್ ಡಿಸೋಜಾ, ಎ.ಎಸ್.ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯದ ಎನ್.ಸಿ.ಸಿ ವಿದ್ಯಾರ್ಥಿಗಳು, ಭೋದಕ ಹಾಗೂ ಭೋದಕರ ಹೊರತಾದ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande