ಅತಿವೃಷ್ಟಿ ಪ್ರದೇಶಗಳಿಗೆ ಸಚಿವ ಖಂಡ್ರೆ ಭೇಟಿ
ಬೀದರ್, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ಸುತ್ತಮುತ್ತಲಿನ ಕಣಜಿ ಸೇರಿದಂತೆ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಜಿಲ್ಲೆಯ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿ, ಜಲಾಶಯದ ಸ್ಥಿತಿಗತಿ ಕುರಿತು ಅಧಿಕ
Visit


ಬೀದರ್, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ಸುತ್ತಮುತ್ತಲಿನ ಕಣಜಿ ಸೇರಿದಂತೆ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ನಂತರ ಜಿಲ್ಲೆಯ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿ, ಜಲಾಶಯದ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರಸ್ತುತ 7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 10 ಸಾವಿರ ಕ್ಯೂಸೆಕ್ ನೀರು ಒಳಹರಿವು ಆಗುತ್ತಿದ್ದು 13 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ, ಅಧಿಕಾರಿಗಳು ನಿಬಂಧನೆಗಳಿಗೆ ಅನುಗುಣವಾಗಿ ಜಲಾಶಯದ ಸ್ಥಿತಿಗತಿ ಕಾಪಾಡಿಕೊಂಡು, ಜನರ ಜೀವ ಮತ್ತು ಆಸ್ತಿಗೆ ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಹಾಗೂ ಸೋಯಾಬೀನ್ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಹಲವೆಡೆ ಮನೆಗಳು ಕುಸಿದಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande