ರಾಷ್ಟ್ರೀಯ ಕ್ರೀಡಾ ದಿನದಂದು ಪ್ರಧಾನಿ ಮೋದಿ ಶುಭಾಶಯ
ನವದೆಹಲಿ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ಭಾರತ ರತ್ನ ಮೇಜರ್ ಧ್ಯಾನ್ ಚಂದ್ ಅವರನ್ನು ಸ್ಮರಿಸಿ ಗೌರವ ಸಲ್ಲಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಅವರ ಶ್ರೇಷ್ಠತೆ ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ. ಕಳೆದ ದಶಕದಲ್ಲಿ ಭಾರತದ ಕ್ರೀಡಾ
Pm


ನವದೆಹಲಿ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ಭಾರತ ರತ್ನ ಮೇಜರ್ ಧ್ಯಾನ್ ಚಂದ್ ಅವರನ್ನು ಸ್ಮರಿಸಿ ಗೌರವ ಸಲ್ಲಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಅವರ ಶ್ರೇಷ್ಠತೆ ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ಕಳೆದ ದಶಕದಲ್ಲಿ ಭಾರತದ ಕ್ರೀಡಾ ಕ್ಷೇತ್ರದಲ್ಲಿ ಸಂಭವಿಸಿರುವ ಪರಿವರ್ತನೆಗಳನ್ನು ಉಲ್ಲೇಖಿಸಿದ ಅವರು, “ಯುವ ಪ್ರತಿಭೆಗಳನ್ನು ಪೋಷಿಸುವ ಕಾರ್ಯಕ್ರಮಗಳಿಂದ ಹಿಡಿದು ವಿಶ್ವದರ್ಜೆಯ ಸೌಲಭ್ಯಗಳ ನಿರ್ಮಾಣದವರೆಗೆ, ಭಾರತದಲ್ಲಿ ರೋಮಾಂಚಕ ಕ್ರೀಡಾ ಪರಿಸರ ವ್ಯವಸ್ಥೆ ಬೆಳೆಯುತ್ತಿದೆ. ಕ್ರೀಡಾಪಟುಗಳಿಗೆ ಬೆಂಬಲ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಭಾರತವನ್ನು ಜಾಗತಿಕ ಕ್ರೀಡಾ ಶ್ರೇಷ್ಠತೆಯ ಕೇಂದ್ರವನ್ನಾಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande