ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ : ದಾವಣಗೆರೆ ಸಿಇಓ
ದಾವಣಗೆರೆ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಕ್ರಿಕೆಟ್ ಗೆ ಮಾತ್ರ ಹೆಚ್ಚು ಆದ್ಯತೆ ನೀಡದೇ ವೈಯಕ್ತಿಕ ಕ್ರೀಡೆಗಳತ್ತ ಆಸಕ್ತಿ ವಹಿಸಬೇಕೆಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ
ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ : ದಾವಣಗೆರೆ ಸಿಇಓ


ದಾವಣಗೆರೆ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕ್ರಿಕೆಟ್ ಗೆ ಮಾತ್ರ ಹೆಚ್ಚು ಆದ್ಯತೆ ನೀಡದೇ ವೈಯಕ್ತಿಕ ಕ್ರೀಡೆಗಳತ್ತ ಆಸಕ್ತಿ ವಹಿಸಬೇಕೆಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೈಸಿಕಲ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾ ಕಾರ್ಯಕ್ರಮಗಳ ಉದ್ಘಾಟಿಸಿ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು.

ಕ್ರೀಡೆಯಲ್ಲಿ ಭೇದ-ಭಾವ ಇರಬಾರದು, ಸೋಲು ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳಬೇಕು. ಉತ್ತಮ ಕ್ರೀಡಾಪಟುವಾಗಬೇಕಾದರೆ, ಬರಿ ಕ್ರೀಡೆಯಲ್ಲಿ ತೊಡಗುವುದು ಅಷ್ಟೇ ಅಲ್ಲದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರು ಯಾವುದಾದರೂ ಚೇಸ್, ಕೇರಂ, ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್ ಮುಂತಾದ ಒಂದು ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande