ದಾವಣಗೆರೆ, 29 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಎಸ್.ಎಸ್.ಪಿ ಮೂಲಕ ನೇರ ನಗದು ವರ್ಗಾವಣೆ ತಂತ್ರಾಂಶದ ಮೂಲಕ ಅರ್ಹ ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ವಿದ್ಯಾರ್ಥಿವೇತನ ಪಾವತಿಸಲಾಗುವುದು.
ಅರ್ಹ ವಿದ್ಯಾರ್ಥಿಗಳ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಸೆಪ್ಟೆಂಬರ್ 7 ರವರೆಗೆ ಹತ್ತಿರದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ. ದಾವಣಗೆರೆ, ಜಗಳೂರು, ಮತ್ತು ಚನ್ನಗಿರಿ ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ ಆಧಾರ್ ಸೀಡಿಂಗ್ ಮಾಡಿಸಿಕೊಳ್ಳಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa