ಕ್ರೀಡಾಮನೋಭಾವ ಜೀವನದ ಯಶಸ್ಸಿನ ಗುಟ್ಟು : ಸಂಗಮೇಶ ಬಬಲೇಶ್ವರ
ಧಾರವಾಡ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಇಂದಿನ ಯುವ ಕ್ರೀಡಾಪಟುಗಳು ನಮ್ಮ ರಾಷ್ಟ್ರದ ಸಾಧಕ ಕ್ರೀಡಾಪಟುಗಳ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸೋಲು ಗೆಲವುಗಳನ್ನು ಸಮಾನವಾಗಿ ಕಾಣುವ ಕ್ರೀಡಾನೋಭಾವವೇ ಜೀವನದ ಯಶಸ್ಸಿನ ಗುಟ್ಟು. ಅದನ್ನು ಅರಿತು ನಡೆಯಬೇಕು ಎಂದು ಕರ್ನಾಟಕ ಬಾಲ ವಿಕಾಸ ಅಕಾಡಮಿ ಅ
Sports day


ಧಾರವಾಡ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಇಂದಿನ ಯುವ ಕ್ರೀಡಾಪಟುಗಳು ನಮ್ಮ ರಾಷ್ಟ್ರದ ಸಾಧಕ ಕ್ರೀಡಾಪಟುಗಳ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸೋಲು ಗೆಲವುಗಳನ್ನು ಸಮಾನವಾಗಿ ಕಾಣುವ ಕ್ರೀಡಾನೋಭಾವವೇ ಜೀವನದ ಯಶಸ್ಸಿನ ಗುಟ್ಟು. ಅದನ್ನು ಅರಿತು ನಡೆಯಬೇಕು ಎಂದು ಕರ್ನಾಟಕ ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಧಾರವಾಡ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತವಾಗಿ ಮೇಜರ್ ಧ್ಯಾನ್‍ಚ್‍ಂದ ರವರ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಕ್ರೀಡೆಯಲ್ಲಿ ಯಾವುದೇ ಜಾತಿ, ಧರ್ಮದ ಕಟ್ಟಳೆಗಳಿಲ್ಲ, ಮೇಲು ಕೀಳು ಎಂಬ ಭೇದಭಾವ ಇಲ್ಲ, ಬಡವ ಶ್ರೀಮತ ಎಂಬುದಿಲ್ಲ. ಕ್ರೀಡಾ ಸಾಧಕರಿಗೆ, ಸ್ಪರ್ಧಾ ವಿಜೇತರಿಗೆ ಸಿನಿಮಾ ನಟಿಯರಿಗಿಂತ ಹೆಚ್ವು ಗೌರವ, ಅಭಿಮಾನವಿದೆ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅನೇಕ ಭಾರತೀಯರು ವಿಶ್ವಮನ್ನಣೆ ಗಳಿಸಿದ್ದಾರೆ. ಅವರ ಸಾಧನೆ, ಜೀವನ ಮೌಲ್ಯಗಳು ನಮಗೆ, ನಮ್ಮ ಕ್ರೀಡಾಪಟುಗಳಿಗೆ ಸ್ಪೂರ್ತಿ ಆಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಕ್ರೀಡಾ ಹವ್ಯಾಸವನ್ನು ಹೊಂದಿರಬೇಕು. ಮೇಜರ್ ಧ್ಯಾನ್‍ಚ್‍ಂದ ಅವರಂತೆ ಏಗ್ರಾತೆ, ಸಾಧನೆಗೆ ಅಚಲ ಮನಸ್ಸು, ತರಬೇತಿಯಲ್ಲಿನ ತನ್ಮಯತೆ ಮತ್ತು ನಿರ್ಧಿಷ್ಟ ಗುರಿ ಇರಬೇಕು. ಅಂದಾಗ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande