ಗದಗ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿಸಲ್ಲಿಸಲು ಕೊನೆಯ ದಿ: 31.10.2025.
ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಹತೆಗಳು :
ಈ ಯೋಜನೆಯಲ್ಲಿ ಸಿ.ಇ.ಟಿ. ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/- ಗಳ ಸಾಲವನ್ನು ಶೇ.2 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.
ವ್ಯಾಸಂಗಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷðಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
ಅರ್ಜಿಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿಯಲ್ಲಿ ಪಡೆದಿರಬೇಕು ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ ಖಾತೆಗೆ ಆಧಾರ ಸಂಖ್ಯೆಯನ್ನು ಸೀಡಿಂಗ ಮಾಡಿಸಿರಬೇಕು.
ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33% ಹಾಗೂ ವಿಕಲಚೇತನರಿಗೆ ಶೇ.5% ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಮೇಲ್ಕಾಣಿಸಿದ ಯೋಜನೆಗಳ ಮಾರ್ಗಸೂಚಿ ಹಾಗೂ ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಈ ಕಿಖ ಕೋಡ್ ಅನ್ನು ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ. ಸಂಪರ್ಕ ವಿವರ ನಿಗಮದ ಸಹಾಯವಾಣಿ: 9448451111 ಬೆಳಿಗ್ಗೆ:10.00ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP