ಹೋಂಡಾ ಕಂಪನಿಯಿ0ದ ಮೈಲಾಂಡಹಳ್ಳಿ ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ
ಹೋಂಡಾ ಕಂಪನಿಯಿ0ದ ಮೈಲಾಂಡಹಳ್ಳಿ ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ
ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಮೈಲಾಂಡಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹೋಂಡಾ ಕಂಪನಿಯಿAದ ಬ್ಯಾಗ್ ಮತ್ತು ನೋಟ್‌ಪುಸ್ತಕ ವಿತರಿಸಲಾಯಿತು.


ಕೋಲಾರ, ೦೩ ಆಗಸ್ಟ್ (ಹಿ.ಸ) :

ಆ್ಯಂಕರ್ : ಕೈಗಾರಿಕೆಗಳ ಸಿ.ಎಸ್.ಆರ್ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮಾತ್ರ ಬಳಕಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ಹಿನ್ನಲೆಯಲ್ಲಿ ನರಸಾಪುರದ ಹೊಂಡಾ ಕಂಪನಿಯಿ0ದ ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಮೈಲಾಂಡಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ನೋಟ್ ಬುಕ್, ಬ್ಯಾಗ್ ವಿತರಿಸಲಾಯಿತು,

ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಬ್ಯಾಗ್ ಹಸ್ತಾಂತರ ಮಾಡಿ ಮಾತನಾಡಿ ಕಂಪನಿಗಳ ಸಿಎಸ್‌ಆರ್ ಅನುದಾನವನ್ನು ಶಿಕ್ಷಣ, ಆರೋಗ್ಯ ಮತ್ತು ಕುಡಿಯುವ ನೀರಿಗೆ ಬಳಸಲು ಈಗಾಗಲೇ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದ್ದಾರೆ ಅನಿಟ್ಟಿನಲ್ಲಿ ಹೊಂಡಾ ಕಂಪನಿಯಿ0ದ ಬಡವರಿಗೆ ಅದರಲ್ಲೂ ವಿಶೇಷವಾಗಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲಾಗಿದೆ ಮುಂದಿನ ದಿನಗಳಲ್ಲಿ ಇತರೆ ಶಾಲೆಗಳಿಗೂ ನೀಡುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಹೊಂಡಾ ಕಂಪನಿಯ ಅಧಿಕಾರಿ ಮಲ್ಲಿಕಾರ್ಜುನ್, ಗ್ರಾಮ ಪಂಚಾಯಿತಿ ಸದಸ್ಯ ಬೊಟ್ಟು ರಾಜಪ್ಪ, ಮುಖಂಡರಾದ ಪ್ರಭಾಕರ್, ಚಿನ್ನಾಪುರ ನಾರಾಯಣಸ್ವಾಮಿ, ಸೇರಿದಂತೆ ಹೊಂಡಾ ಕಂಪನಿಯ ಸಿಬ್ಬಂದಿ, ಶಾಲೆಯ ಶಿಕ್ಷಕರು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಮೈಲಾಂಡಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹೋಂಡಾ ಕಂಪನಿಯಿ0ದ ಬ್ಯಾಗ್ ಮತ್ತು ನೋಟ್‌ಪುಸ್ತಕ ವಿತರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande