ಕುಲ್ಗಾಮ್‌ನಲ್ಲಿ ಮುಂದುವರೆದ ಗುಂಡಿನ ಚಕಮಕಿ
ಕುಲ್ಗಾಮ್, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿ ಭಾನುವಾರ ಮೂರನೇ ದಿನವು ಮುಂದುವರೆದಿದೆ. ರಾತ್ರಿಯಿಡೀ ಸ್ಫೋಟಗಳು ಮತ್ತು ಗುಂಡಿನ ದಾಳಿ ನಡೆದಿದ್ದು, ಪರಿಸ್ಥಿತಿಯು
ಕುಲ್ಗಾಮ್‌ನಲ್ಲಿ ಮುಂದುವರೆದ ಗುಂಡಿನ ಚಕಮಕಿ


ಕುಲ್ಗಾಮ್, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿ ಭಾನುವಾರ ಮೂರನೇ ದಿನವು ಮುಂದುವರೆದಿದೆ. ರಾತ್ರಿಯಿಡೀ ಸ್ಫೋಟಗಳು ಮತ್ತು ಗುಂಡಿನ ದಾಳಿ ನಡೆದಿದ್ದು, ಪರಿಸ್ಥಿತಿಯು ಅತ್ಯಂತ ಸಂಕೀರ್ಣವಾಗಿದೆ ಎಂದು ಮೂಲಗಳು ತಿಳಿಸಿವೆ.

:ಶುಕ್ರವಾರ ಗುಪ್ತಚರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ಆರಂಭಗೊಂಡಿದ್ದು, ಇದುವರೆಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದು, ಇನ್ನೊಬ್ಬ ಉಗ್ರನಿಗೆ ಗಾಯವಾಗಿದೆ. ಘಟನೆಯಲ್ಲಿ ಭದ್ರತಾ ಪಡೆ ಓರ್ವ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಯಾಚರಣೆಗೆ ಡ್ರೋನ್‌ಗಳು, ಥರ್ಮಲ್ ಇಮೇಜಿಂಗ್ ಸಾಧನಗಳು ಮತ್ತು ಪ್ಯಾರಾ-ಎಸ್‌ಎಫ್ ತಂಡಗಳು ಭಾಗವಹಿಸಿವೆ.

ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಹಾಗೂ ಭಾರತೀಯ ಸೇನೆಯ 15ನೇ ಕಾರ್ಪ್ಸ್‌ನ ಜಿಓಸಿ ಸೇರಿದಂತೆ ಹಿರಿಯ ಅಧಿಕಾರಿಗಳು ಕಾರ್ಯಾಚರಣೆ ಮೇಲುಸ್ತುವಾರಿ ವಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande