ನಾನಾ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯ ಮಲೇಬೆನ್ನೂರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ ಸಾಮಾನ್ಯ ನಿಧಿಯ 24.10%, 7.25% ಹಾಗೂ 5% ರ ಯೋಜನೆಯ ವೈಯಕ್ತಿಕ ಕಾರ್ಯಕ್ರಮದಡಿ ಶೈಕ್ಷಣಿಕ ಪ್ರೋತ್ಸಾಹಧನ, ಬ್ಯಾಂಕ್ ಮೂಲಕ ಸಾಲ ಸೌಲಭ್ಯಕ್ಕಾಗಿ ವಿತರಿಸಲು ಹಾಗೂ ವೃತ
ನಾನಾ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ದಾವಣಗೆರೆ, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಯ ಮಲೇಬೆನ್ನೂರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ ಸಾಮಾನ್ಯ ನಿಧಿಯ 24.10%, 7.25% ಹಾಗೂ 5% ರ ಯೋಜನೆಯ ವೈಯಕ್ತಿಕ ಕಾರ್ಯಕ್ರಮದಡಿ ಶೈಕ್ಷಣಿಕ ಪ್ರೋತ್ಸಾಹಧನ, ಬ್ಯಾಂಕ್ ಮೂಲಕ ಸಾಲ ಸೌಲಭ್ಯಕ್ಕಾಗಿ ವಿತರಿಸಲು ಹಾಗೂ ವೃತ್ತಿ ನಿರತ ವಕೀಲರಿಗೆ ಪುಸ್ತಕ ಖರೀದಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ದಾಖಲೆಗಳ ವಿವರಗಳನ್ನು ವೆಬ್ ಸೈಟ್ http://www.malebennurutown.mrc.gov.in ರಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮಲೇಬೆನ್ನೂರು ಪುರಸಭೆಯ ಕಚೇರಿಯಲ್ಲಿ ಪಡೆಯಬಹುದು. ಎಂದು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande