ಕಾರ್ಮಿಕ ಸಚಿವರ ಶಿವಮೊಗ್ಗ ಜಿಲ್ಲಾ ಪ್ರವಾಸ
ಶಿವಮೊಗ್ಗ, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆಗಷ್ಟ್.04 ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಆ. 04 ರಂದು ಪ್ರವಾಸಿ ಮಂದಿರದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿ
ಕಾರ್ಮಿಕ ಸಚಿವರ ಶಿವಮೊಗ್ಗ ಜಿಲ್ಲಾ ಪ್ರವಾಸ


ಶಿವಮೊಗ್ಗ, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆಗಷ್ಟ್.04 ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಆ. 04 ರಂದು ಪ್ರವಾಸಿ ಮಂದಿರದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ನಂತರ ಸಿದ್ಲಿಪುರದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ. ಬೆ. 11.00ಕ್ಕೆ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಮಧ್ಯಾಹ್ನ ಭದ್ರಾವತಿಗೆ ತೆರಳಿ ಉಚ್ಚನಿಪುರದಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande