ಬೆಂಗಳೂರು, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಒಳ ಮೀಸಲಾತಿ ಜಾರಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಮಾಣಿಕರಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,
ಈ ವಿಚಾರದಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕರಾಗಿಲ್ಲ. ಒಳಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿ ಆಗಬೇಕು ಎನ್ನುತ್ತಿದ್ದರು, ಕಳೆದ ವರ್ಷ ಸುಪ್ರೀಂಕೋರ್ಟ್ ತೀರ್ಪು ಬಂದ ಮೇಲೆ ತಟಸ್ಥರಾಗಿದ್ದಾರೆ, 2013 ರಿಂದಲೂ ಎಸ್‌ಸಿ ಸಮುದಾಯಗಳಿಗೆ ಕಾಂಗ್ರೆಸ್ ಮೂಗಿಗೆ ತುಪ್ಪ ಸವರಿಕೊಂಡೇ ಬಂದಿದೆ. ನಾಳೆ ವರದಿ ಸಲ್ಲಿಕೆ ಆಗಲಿದೆ, ಆದರೆ, ಈ ಸರ್ಕಾರ ವರದಿ ಜಾರಿ ಮಾಡುತ್ತದೆ ಅನ್ನುವ ವಿಶ್ವಾಸ ಎಸ್‌ಸಿ ಸಮುದಾಯಕ್ಕೇ ಇಲ್ಲ ಎಂದರು.
ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಮೇಲೆ ಆರೋಪ ಮಾಡುವ ಅಗತ್ಯ ಇಲ್ಲ. ಬಿಜೆಪಿ ಸರಕಾರ ಒಳಮೀಸಲಾತಿಗೆ ಸಂಪುಟ ಉಪಸಮಿತಿ ರಚನೆ ಮಾಡಿ ವರದಿ ಪಡೆಯಲಾಗಿತ್ತು. ಆದರೆ, ಇವರು ಸಂವಿಧಾನ ತಿದ್ದುಪಡಿ ಆಗಬೇಕು ಎಂದು ಸಬೂಬು ಕೊಡುತ್ತಿದ್ದರು. ಈಗ ಸುಪ್ರೀಂಕೋರ್ಟ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಜಾರಿ ಮಾಡಲೇಬೇಕು. ನ್ಯಾ. ನಾಗಮೋಹನ್ ದಾಸ್ ವರದಿ ಏನು ಹೇಳುತ್ತದೆ ನೋಡಬೇಕು. ಎಷ್ಟು ಪ್ರಮಾಣದಲ್ಲಿ ಒಳಮೀಸಲಾತಿ ಹಂಚುತ್ತಾರೆ ಅಂತ ನೋಡೋಣ. ಇವರು ಜಾರಿ ಮಾಡುತ್ತಾರೆ ಎಂದು ಆ ಸಮುದಾಯಕ್ಕೆ ವಿಶ್ವಾಸ ಇಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa