ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಪ್ರಕರಣ : ಮೂವರ ಬಂಧನ
ಸವದತ್ತಿ, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರ
Arrest


ಸವದತ್ತಿ, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ.

ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ.

ಜುಲೈ 14ರಂದು ಈ ಘಟನೆ ನಡೆದಿತ್ತು. ಅಸ್ವಸ್ಥಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ನೀರಿನ ಟ್ಯಾಂಕ್ ಬಳಿ ಒಂದು ಬಾಟಲ್ ಬಿದ್ದಿತ್ತು. ಆ ಬಾಟಲಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಅದರಲ್ಲಿ ವಿಷದ ಅಂಶ ಪತ್ತೆಯಾಗಿತ್ತು. ಕೂಡಲೇ ಪೊಲೀಸರು ಟ್ಯಾಂಕ್​ನಲ್ಲಿದ್ದ ನೀರನ್ನು ಎಫ್ಎಸ್ಎಲ್​ಗೆ ಕಳುಹಿಸಿದ್ದರು. ಈ ಕುರಿತು ಮುಖ್ಯಶಿಕ್ಷಕ ಸುಲೇಮಾನ್ ಗೋರಿನಾಯಕ್ ಅವರು ನೀಡಿದ ದೂರಿನ‌ ಆಧಾರದಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande