ಚಿತ್ರದುರ್ಗ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ನ್ಯಾಯಾಲಯದ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದು,
ನ್ಯಾಯಾಲಯದ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ. ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಬಂದ ತಕ್ಷಣವೇ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಆಗ ಆರೋಪ ಸಾಬೀತಾಗಿದೆಯೋ ಇಲ್ಲವೋ ಎಂಬ ಪ್ರಶ್ನೆಗೆ ಉತ್ತರವಾಗಿರಲಿಲ್ಲ. ನಮ್ಮ ವರಿಷ್ಠರು ತೆಗೆದುಕೊಂಡ ತೀರ್ಮಾನ ಸ್ಪಷ್ಟವಾಗಿತ್ತು. ಇದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಾನು ಇಚ್ಛಿಸುವುದಿಲ್ಲ, ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa