ರಿಷಿ ಹೊಸ ಸಿನಿಮಾ 'ಮಂಗಳಾಪುರಂ'ಗೆ ಅದ್ದೂರಿ ಮಹೂರ್ತ
ಮಂಗಳಾಪುರಂ'ಗೆ ರಿಷಿಗೆ ಜೊತೆಯಾದ ಗೌತಮಿ ಜಾದವ್
Film 1


Film


ಮೂಡಬಿದಿರೆ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : 'ಮಂಗಳಾಪುರಂ' ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿದ ಮತ್ತೊಂದು ಹೊಸ ಸಿನಿಮಾ. ಆಪರೇಷನ್ ಅಲಮೇಲಮ್ಮ, ಕವಲುದಾರಿ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ವಿಭಿನ್ನ ಸಿನಿಮಾಗಳ ಮೂಲಕ, ವಿನೂತನ ಪಾತ್ರಗಳ ಮೂಲಕ ಅಭಿಮಾನಿಗಳ ಮುಂದೆ ಬರುವ ನಟ ರಿಷಿ ಈ ಬಾರಿ ಮಂಗಳಾಪುರಂ ಎನ್ನುವ ಮತ್ತೊಂದು ವಿಭಿನ್ನ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ರಿಷಿ ಜೊತೆಗೆ ಪ್ರಮುಖ ಪಾತ್ರದಲ್ಲಿ ಕಾಶಿನಾಥ್ ಅವ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಟೈಟಲ್ ಮೂಲಕ ಗಮನ ಸೆಳೆದಿದ್ದ ಮಂಗಳಾಪುರಂ ಸಿನಿಮಾ ಇದೀಗ ಅದ್ದೂರಿ ಮುಹೂರ್ತ ಮಾಡಿಕೊಳ್ಳುವ ಮೂಲಕ ಚಿತ್ರೀಕರಣ ಪ್ರಾರಂಭಿಸಿದೆ.

ಮಂಗಳಾಪುರಂ ಸಿನಿಮಾದ ಮುಹೂರ್ತ ಸಮಾರಂಭ ಮೂಡಬಿದಿರೆಯ ಅಲಂಗಾರಿನಲ್ಲಿರುವ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಅಲಂಗಾರು ಈಶ್ವರ ಭಟ್, ಉದ್ಯಮಿ ಶ್ರೀಪತಿ ಭಟ್ ಸೇರಿದಂತೆ ಅನೇಕರು ಹಾಜರಿದ್ದು ಸಿನಿಮಾತಂಡಕ್ಕೆ ಶುಭಹಾರೈಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ ಮಂಗಳಾಪುಂ ಸಿನಿಮಾಗೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಅಂದಹಾಗೆ ಮಂಗಳಾಪುರಂ ರಂಜಿತ್ ರಾಜ್ ಸುವರ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೊದಲ ಕನ್ನಡ ಸಿನಿಮಾ. ಈ ಮೊದಲು ತುಳು ಸಿನಿಮಾ ಮಾಡಿದ್ದ ರಂಜಿತ್ ರಾಜ್ ಅವರು ಇದೀಗ ಮಂಗಳಾಪುರಂ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ವಾರಾಹಿ ಕ್ರಿಯೇಶನ್ ಮೂಲಕ ಈ ಚಿತ್ರವನ್ನು ವಿದ್ವಾನ್ ಪ್ರಸನ್ನ ತಂತ್ರಿ, ರಾಮ್ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

ಮಂಗಳಾಪುರಂನಲ್ಲಿ ರಿಷಿಗೆ ಜೋಡಿಯಾಗಿ ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದ ನಟಿ ಗೌತಮಿ ಜಾದವ್ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಗೌತಮಿ ಮತ್ತು ರಿಷಿ ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇನ್ನೂ ವಿಶೇಷ ಎಂದರೆ ಚಿತ್ರಕ್ಕೆ ಗೌತಮಿ ಜಾದವ್ ಅವರ ಪತಿ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಪತ್ನಿಯ ನಟನೆಯನ್ನು ಪತಿಯೇ ಸೆರೆಹಿಡಿಯುತ್ತಿರುವುದು ವಿಶೇಷ. ಇನ್ನೂ ಉಳಿದಂತೆ ಸಿವಿಮಾದಲ್ಲಿ ವಿದ್ಯನಾಥ್ ಬಿರಾದರ್, ದೀಪಕ್ ರೈ ದೇವರಾಜ್ ಕಾಪಿಕಾಡ್,ರಾಮದಾಸ್ ಸೇರಿದಂತೆ ಕರಾವಳಿಯ ಅನೇಕ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ.

ಮಂಗಳಾಪುರಂ ಸಿನಿಮಾ ಒಂದು ಊರಿನಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಕಥೆ. ನಂಬಿಕೆ - ಮೂಡನಂಬಿಕೆ ಹಾಗೂ ಪವಾಡ ವಿಚಾರದ ಮೇಲೆ ಕಥೆ ಸಾಗಲಿದೆ ಕಾರ್ಕಳ, ತೀರ್ಥಹಳ್ಳಿ‌, ಮಡಿಕೇರಿ, ಬೆಂಗಳೂರು ಸುತ್ತಾಮುತ್ತಾ ಚಿತ್ರೀಕರಣ ನಡೆಯಲಿದೆ. ಅನೂಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande