ವಿಜಯಪುರ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಂದ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ದಿನಾಂಕ : 07-10-2025 ರಂದು ಆಚರಿಸಲಾಗುತ್ತಿದ್ದು, ಈ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡ ಜನಾಂಗದ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.
ಆಸಕ್ತ ಅರ್ಹರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಿನಾಂಕ : 10-09-2025ರೊಳಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ವಿಜಯಪುರ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande