ವಿಜಯಪುರ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಸೆಪ್ಟಂಬರ್ ಮಾಹೆಯೊಳಗೆ (ಆಧಾರ ಕಾರ್ಡ ಪ್ರತಿ, ಪಿಂಚಣಿ ಪುಸ್ತಕ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಐಡೆಂಟಿಸಿ ಅಳತೆಯ ಫೋಟೋ) ಜೀವಿತ ಪ್ರಮಾಣ ಪತ್ರವನ್ನು ಖುದ್ದಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ, ವಿಜಯಪುರ ಇವರಿಗೆ ಸಲ್ಲಿಸಲು ತಿಳಿಸಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 08352-251261 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande