ಕೋಲಾರ, ೩೦ ಆಗಸ್ಟ್(ಹಿ.ಸ.) :
ಆ್ಯಂಕರ್ : ಮಕ್ಕಳು ತಮ್ಮ ತಂದೆ ತಾಯಿಯವರಿಗೆ ಗೌರವ ನೀಡುವುದು ಕಡಿಮೆ ಆಗಿದೆ. ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಯುವುದು ಬಹಳ ಅವಶ್ಯ, ಶಿಕ್ಷಣದೊಂದಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಕಲಿಸಿದರೆ ಮಕ್ಕಳ ಬದುಕು ಉಜ್ವಲವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ.ಆರ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಿ ಶಕ್ತಿಭವನ ವೇಮಗಲ್ ಕೋಲಾರದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಸಮುದಾಯ ಆದಾರಿತ ಚಟುವಟಿಕೆಗಳು, ಮಾತೃವಂದನ ಸಪ್ತಾಹ ಹಾಗೂ ಬಾಲ್ಯ ವಿವಾಹ ಕಾಯ್ದೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಉದ್ದೇಶಿಸಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ, ಬಾಲ್ಯ ವಿವಾಹ ನಿಷೇಧ ಕಾಯ್ದೆಯಲ್ಲಿ ೧೮ ವರ್ಷ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷ ಒಳಗಿನ ಗಂಡು ಮಕ್ಕಳು ಮದುವೆ ಆಗುವುದು ಅಪರಾಧ. ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಮತ್ತು ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆ ಮಾಡಿ ತಿಳಿಸಬೇಕು. ಬಾಲ್ಯ ವಿವಾಹ ಮುಕ್ತ ಕೋಲಾರ ಜಿಲ್ಲೆ ಮಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು.
ಇತ್ತೀಚಿಗೆ ಎಲ್ಲ ಕಡೆ ಬಾಲ್ಯವಿವಾಹ ಮಾಡುವುದು ಹೆಚ್ಚಾಗುತ್ತದೆ ಅದು ಸಹ ಮಕ್ಕಳ ಶಿಕ್ಷಣ ಹಕ್ಕಿನ ಉಲ್ಲಂಘನೆ ಆಗುತ್ತದೆ ೧೮ ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹಾಗೂ ೨೧ ವರ್ಷ ಒಳಗಿನ ಗಂಡು ಮಕ್ಕಳಿಗೆ ಬಾಲ್ಯವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅಡಿಯಲ್ಲಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಇತ್ತೀಚಿಗೆ ೧೮ ವರ್ಷ ಒಳಗಿನ ಮಕ್ಕಳು ತಂಬಾಕು ಉತ್ಪನ್ನ ಮತ್ತು ಮಾಧಕ ವಸ್ತುಗಳ ವ್ಯಸನಿಗಳಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ಮೋಟಾರು ವಾಹನಗಳನ್ನು ಚಲಾವಣೆ ಮಾಡುತ್ತಿದ್ದಾರೆ. ಅದು ಮಕ್ಕಳ ಜೀವನಕ್ಕೆ ತೊಂದರೆ. ಅಷ್ಟೇ ಅಲ್ಲದೆ ಅವರ ಭವಿಷ್ಯಕ್ಕೂ ತೊಂದರೆ ಆಗುತ್ತದೆ. ಎಲ್ಲರೂ ಕಾನೂನುಗಳನ್ನು ಅನುಸರಿಸಿ ನಡೆದುಕೊಳ್ಳಬೇಕು. ಕಾನೂನಿನ ನೆರವಿಗೆ ಓಂಐSಂ ಊeಟಠಿಟiಟಿe ೧೫೧೦೦ ಕ್ಕೆ ಉಚಿತ ಕರೆ ಮಾಡಿ ಅವಕಾಶ ಉಪಯೋಗಿಸಿಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಎನ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಶ್ರೀ ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ನಾಗರತ್ನ ವಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾರಾಯಣಸ್ವಾಮಿ, ಮುಖ್ಯ ಅಧಿಕಾರಿ(ವೇಮಗಲ್ ಮತ್ತು ಕುರುಗಲ್ ಪಟ್ಟಣ ಪಂಚಾಯತಿ) ವೆಂಕಟೇಶ್ ಎಸ್.ಎಂ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿ ಕುಮಾರ್ ಇ. ಇವರು ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಚಿತ್ರ : ಕೋಲಾರ ತಾಲ್ಲೂಕಿನ ವೇಮಗಲ್ನಲ್ಲಿ ಮಾತೃವಂದನ ಸಪ್ತಾಹ ಹಾಗೂ ಬಾಲ್ಯ ವಿವಾಹ ಕಾಯ್ದೆಗಳ ಕುರಿತು ಅರಿವು ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ.ಆರ್ ಉದ್ಘಾಟಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್