ಚಾಮುಂಡಿ ಬೆಟ್ಟ ಹಿಂದೂಗಳದ್ದು : ಪ್ರಮೋದಾದೇವಿ ಒಡೆಯರ್
ಮೈಸೂರು, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳದೇ. ಚಾಮುಂಡಿ ದೇವಿ ಯದುವಂಶದ ಮನೆ ದೇವರು, ಧಾರ್ಮಿಕ ತ
Pramodadevi


ಮೈಸೂರು, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ.

ಚಾಮುಂಡಿ ಬೆಟ್ಟ ಹಿಂದೂಗಳದೇ. ಚಾಮುಂಡಿ ದೇವಿ ಯದುವಂಶದ ಮನೆ ದೇವರು, ಧಾರ್ಮಿಕ ತಾಯಿ. ದೇವಸ್ಥಾನದಲ್ಲಿ ಹಿಂದೂ ವಿಧಿವಿಧಾನಗಳ ಪ್ರಕಾರವೇ ಪೂಜೆ ನಡೆಯುತ್ತಿದೆ. ರಾಜಕಾರಣಿಗಳು ಏನಾದರೂ ಹೇಳಿದರೆ, ಅದೇನೂ ಸತ್ಯವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಚಾಮುಂಡಿಬೆಟ್ಟ ದೇವಸ್ಥಾನ ಕುರಿತು ತಮ್ಮ ಮನೆತನವು ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿರುವುದಾಗಿ ತಿಳಿಸಿದ ಪ್ರಮೋದಾದೇವಿ, ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತವಲ್ಲ. 70 ವರ್ಷಗಳಿಂದ ಈ ಪ್ರಕರಣ ನ್ಯಾಯಾಲಯದಲ್ಲಿದೆ. ಆದೇಶ ಬಂದ ಬಳಿಕವೇ ವಿಷಯ ಸ್ಪಷ್ಟವಾಗುತ್ತದೆ ಎಂದರು.

ದಸರಾ ಕುರಿತು ಮಾತನಾಡಿದ ಅವರು, ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ, ನಮ್ಮ ದಸರಾ ಖಾಸಗಿಯಾಗಿ ನಡೆಯುತ್ತದೆ. ಅಂಬಾರಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದಿಲ್ಲ, ಮನೆಯವರಲ್ಲಿ ಒಬ್ಬರು ಮಾತ್ರ ಹೋಗುತ್ತಾರೆ. ದಸರಾ ವಿಚಾರದಲ್ಲಿ ಸಾಕಷ್ಟು ರಾಜಕೀಯವಾಗಿದೆ, ಇದನ್ನು ಮುಂದುವರಿಸುವುದು ಬೇಡ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande