ವಿಜಯಪುರ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ನಾಳೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ವಿಜಯಪುರ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಿಸಿದ ಗ್ರಾಮ ಪಂಚಾಯತ್ ಕಟ್ಟಡ, ಎನ್‍ಆರ್‍ಎಲ್‍ಎಂ ಗೋದಾಮು ಮತ್ತು ಕಾಮಗಾರಿಗಳ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande