ರಾಜ್ಯದ ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಗೆ ಇಂದು ಮತ್ತು ನಾಳೆ ಕಿತ್ತಳೆ ಎಚ್ಚರಿಕೆ ನೀಡಲಾಗಿದ್ದು, ಕಾರವಾರ ತಾಲೂ
ರಾಜ್ಯದ ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ


ಬೆಂಗಳೂರು, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಗೆ ಇಂದು ಮತ್ತು ನಾಳೆ ಕಿತ್ತಳೆ ಎಚ್ಚರಿಕೆ ನೀಡಲಾಗಿದ್ದು, ಕಾರವಾರ ತಾಲೂಕಿನ ಅಂಗನವಾಡಿ ಮತ್ತು ಪ್ರೌಢಶಾಲೆಗಳಿಗೆ, ಹೊನ್ನಾವರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಜಾರಿಯಲ್ಲಿದೆ. ಕರಾವಳಿ ಭಾಗದಲ್ಲಿ ಅಲೆಗಳ ತೀವ್ರತೆ ಹೆಚ್ಚಾಗುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸೆಪ್ಟೆಂಬರ್‌ 1ರಿಂದ 3ರವರೆಗೆ ಹಳದಿ ಎಚ್ಚರಿಕೆ ಜಾರಿಯಲ್ಲಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಕಳಸ, ಮೂಡಿಗೆರೆ, ಶೃಂಗೇರಿ, ಎನ್‌ಆರ್ ಪುರ, ಚಿಕ್ಕಮಗಳೂರು, ತರೀಕೆರೆ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande