ಹೊಸಪೇಟೆ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯುಪಿಎಸ್‍ಸಿ, ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೋಬೇಷರ್, ಗ್ರೂಫ್ ಸಿ, ಆರ್‍ಆರ್‍ಬಿ, ಎಸ್‍ಎಸ್‍ಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು. ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೆÇೀರ್ಟಲ್ https://sevasindhu.Karnataka.gov.in ಆನ್‍ಲೈನ್ ಮೂಲಕ ಸೆ.6 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ https://dom.Karnataka.gov.in ವೆಬ್‍ಸೈಟ್ ವೀಕ್ಷಿಸಿ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್