ರಿಯಾಸಿಯಲ್ಲಿ ಭೂಕುಸಿತ : ಒಂದೇ ಕುಟುಂಬದ ಏಳು ಮಂದಿ ಸಾವು
ರಿಯಾಸಿ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಹೋರ್ ತಹಸಿಲ್‌ನ ಭದ್ದರ್ ಗ್ರಾಮದಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಕಡಿದಾದ ಇಳಿಜಾರಿನಲ್ಲಿದ್ದ ಮನೆ ಭೂಕುಸಿತದಿಂದ ಸಂಪೂರ್ಣವಾಗಿ
Landslide


ರಿಯಾಸಿ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಹೋರ್ ತಹಸಿಲ್‌ನ ಭದ್ದರ್ ಗ್ರಾಮದಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.

ಶನಿವಾರ ಬೆಳಿಗ್ಗೆ ಕಡಿದಾದ ಇಳಿಜಾರಿನಲ್ಲಿದ್ದ ಮನೆ ಭೂಕುಸಿತದಿಂದ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಇದರಿಂದ ಮನೆ ಅವಶೇಷಗಳ ಅಡಿಯಲ್ಲಿ ಸಿಲುಕಿದ ಏಳು ಜನರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಶವಗಳನ್ನು ಹೊರತೆಗೆದಿದ್ದಾರೆ.

ಮೃತರನ್ನು ಭದ್ದರ್ ನಿವಾಸಿ ನಜೀರ್ ಅಹ್ಮದ್, ಅವರ ಪತ್ನಿ ವಜೀರಾ ಬೇಗಂ ಹಾಗೂ ಪುತ್ರರಾದ ಬಿಲಾಲ್ ಅಹ್ಮದ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಆದಿಲ್, ಮೊಹಮ್ಮದ್ ಮುಬಾರಕ್ ಮತ್ತು ಮೊಹಮ್ಮದ್ ವಾಸಿಂ ಎಂದು ಗುರುತಿಸಲಾಗಿದೆ. ನಜೀರ್ ಅಹ್ಮದ್ ಅವರ ಐವರು ಪುತ್ರರೂ ಅಪ್ರಾಪ್ತರು ಎಂದು ತಿಳಿದು ಬಂದಿದೆ.

ಜಿಲ್ಲಾಡಳಿತವು ಭೂಕುಸಿತಕ್ಕೆ ಒಳಪಡುವ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ಎಚ್ಚರಿಕೆ ನೀಡಿದ್ದು, ಭಾರೀ ಮಳೆಯ ಸಮಯದಲ್ಲಿ ಅಸುರಕ್ಷಿತ ಮನೆಗಳಲ್ಲಿ ಉಳಿಯಬಾರದು ಎಂದು ಮನವಿ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande