ಬಳ್ಳಾರಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ನಾಳೆ 31 ಬೆಳಿಗ್ಗೆ 09.30 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ಸಭಾಂಗಣದಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ನ್ಯಾಯಾಧೀಶರಿಗೆ ಮಧ್ಯಸ್ಥಿಕೆ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್