ಸೋಮವಾರ ಮೈಸೂರಿಗೆ ರಾಷ್ಟ್ರಪತಿ ಭೇಟಿ
ಚಾಮುಂಡಿಬೆಟ್ಟ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ
President


ಮೈಸೂರು, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಭಾರತದ ರಾಷ್ಟ್ರಪತಿಗಳು ಸೆಪ್ಟೆಂಬರ್ 1ರಂದು ಸೋಮವಾರ ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಭದ್ರತಾ ಕ್ರಮವಾಗಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ತಾವರೆಕಟ್ಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ರಾಷ್ಟ್ರಪತಿಯವರ ಭೇಟಿ ಹಿನ್ನೆಲೆಯಲ್ಲಿ ಭಕ್ತರು ನಿಬಂಧನೆಗಳಿಗೆ ಸಹಕರಿಸಬೇಕು ಎಂದು ಪ್ರಾಧಿಕಾರ ಮನವಿ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande