ಅತ್ಯಾಚಾರ ಆರೋಪಿ ಕಾಲಿಗೆ ಕಿತ್ತೂರು ಪೊಲೀಸರ ಗುಂಡು
ಬೆಳಗಾವಿ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ಸಾಮೂಹಿಕ ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿ ಆಗಿರುವ ರಮೇಶ್ ಕಿಲ್ಲಾರ್‌ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸರು ಗುಂಡೇಟು ಹಾರಿಸಿ ಬಂಧಿಸಿದ್ದಾರೆ. ಬೆಳಗ್ಗೆ ಕಿತ್ತೂರು ಪೊಲೀಸರು ಆರೋಪಿ ಬಂಧನಕ್ಕೆ ತೆರಳಿದಾಗ, ರಮೇಶ್ ಕಿಲ್ಲಾರ
Firing


ಬೆಳಗಾವಿ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ಸಾಮೂಹಿಕ ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿ ಆಗಿರುವ ರಮೇಶ್ ಕಿಲ್ಲಾರ್‌ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸರು ಗುಂಡೇಟು ಹಾರಿಸಿ ಬಂಧಿಸಿದ್ದಾರೆ.

ಬೆಳಗ್ಗೆ ಕಿತ್ತೂರು ಪೊಲೀಸರು ಆರೋಪಿ ಬಂಧನಕ್ಕೆ ತೆರಳಿದಾಗ, ರಮೇಶ್ ಕಿಲ್ಲಾರ್ ಪೊಲೀಸ್ ಪೇದೆ ಷರೀಫ್ ದಫೇದಾರ್‌ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಪಿಎಸ್‌ಐ ಪ್ರವೀಣ್ ಗೊಂಗೊಳ್ಳಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರು. ಆದರೆ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಓಡಲು ಯತ್ನಿಸಿದಾಗ, ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಗೊಂಡ ಆರೋಪಿ ಹಾಗೂ ಚಾಕು ಇರಿತದಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಇಬ್ಬರನ್ನೂ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿ ರಮೇಶ್ ಕಿಲ್ಲಾರ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಈ ಪ್ರಕರಣದಲ್ಲಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande