ಗೌರಿ-ಗಣೇಶ ಹಬ್ಬ : ಜಿಲ್ಲೆಯಾದ್ಯಂತ ಸೆ.6 ರವರೆಗೆ ಮದ್ಯ ಮಾರಾಟ ನಿಷೇಧ
ಕೊಪ್ಪಳ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : 2025ನೇ ಸಾಲಿನ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಕರ್ನ
ಗೌರಿ-ಗಣೇಶ ಹಬ್ಬ : ಜಿಲ್ಲೆಯಾದ್ಯಂತ ಸೆ.6 ರವರೆಗೆ ಮದ್ಯ ಮಾರಾಟ ನಿಷೇಧ


ಕೊಪ್ಪಳ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : 2025ನೇ ಸಾಲಿನ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಸೆಪ್ಟೆಂಬರ್ 6 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 31 ರಂದು 5ನೇ ದಿನದ ಗಣೇಶ ಮೂರ್ತಿ ವಿಸರ್ಜನೆ, ಸೆಪ್ಟೆಂಬರ್ 2 ರಂದು 7ನೇ ದಿನದ ಗಣೇಶ ಮೂರ್ತಿ ವಿಸರ್ಜನೆ, ಸೆ.5 ರಂದು ಈದ್-ಮಿಲಾದ್ ಹಬ್ಬದ ಆಚರಣೆ ಹಾಗೂ ಸೆ.6 ರಂದು 11ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಇರುವುದರಿಂದ ಆಯಾ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ನಿಯಮಾನುಸಾರ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande