ಕೊಪ್ಪಳ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳಿಗೆ ನೆರವು ನೀಡಲು ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ಗರಿಷ್ಠ ರೂ. 3 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಕೊಪ್ಪಳ ಜಿಲ್ಲೆಗೆ ಪರಿಶಿಷ್ಟ ಜಾತಿಯ 2 ಮತ್ತು ಪರಿಶಿಷ್ಟ ಪಂಗಡಕ್ಕೆ 1 ಗುರಿ ನಿಗದಿಪಡಿಸಲಾಗಿದ್ದು, ಅರ್ಜಿಯನ್ನು ಸೆಪ್ಟೆಂಬರ್ 15 ರೊಳಗಾಗಿ ಜಿಲ್ಲೆಯ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾತಿ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಕೊಪ್ಪಳ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಮೊ.ಸಂ: 9148287937, ಗಂಗಾವತಿ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ದೂರವಾಣಿ ಮೊ.ಸಂ: 9632338221, ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ.ಸಂ: 9632338221 ಗೆ ಸಂಪರ್ಕಿಸುವಂತೆ ಕೊಪ್ಪಳ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್