ಕೋಲಾರ, ೩೦ ಆಗಸ್ಟ್(ಹಿ.ಸ.) :
ಆ್ಯಂಕರ್ : ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಕೋಲಾರ ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಛೇರಿಯಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ನಿರ್ಲಕ್ಷ್ಯ ಖಾಸಗಿ ಆಸ್ಪತ್ರೆಗಳ ಬಗ್ಗೆ ವ್ಯಾಮೋಹ ಹೆಚ್ಚಾಗಿದೆ ಅದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಕೊರತೆಯಾಗ ಬಾರದು ಅವಶ್ಯಕತೆ ಇದ್ದರೆ ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಉಚಿತ ಆರೋಗ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಆರೋಗ್ಯ ವಂಚಿತರಾಗಬಾರದು ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಜಗದೀಶ್ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೈನ್ಸ್ ಗಳನ್ನು ದೂರವಿಟ್ಟು ನಾಲ್ಕು ಸರ್ಕಾರಿ ಅಂಬುಲೈನ್ಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಚಿರಶಾಂತಿ ವಾಹನವನ್ನು ಕೊಟ್ಟರೆ ಅನುಕೂಲವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು ಹೊಸ ವಾಹನವನ್ನು ಕೊಡಿಸಲು ಶಾಸಕ ಕೊತ್ತೂರು ಮಂಜುನಾಥ್ ಸಮ್ಮತಿ ಸೂಚಿಸಿದರು.
ಮೆಡಿಕಲ್ ಕಾಲೇಜಿಗಾಗಿ ಸಾಕಷ್ಟು ಪ್ರಯತ್ನ ಪಟ್ಟು ಜಾರಿ ಮಾಡಿಸಲಾಗಿದೆ ನಮ್ಮ ಗಮನಕ್ಕೆ ಬರದೆ ಸ್ಥಳ ಪರಿಶೀಲಿಸಲು ಅಧಿಕಾರಿಗಳು ಬಂದಿದ್ದಾರೆ ಕಿಡಿಕಾರಿದರು.
ತಾಲೂಕಿನಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಲಿದೆ ಯಾವುದೇ ಸಮಸ್ಯೆ ಇದ್ದರೂ ಸರಕಾರ ಪರಿಹಾರ ಒದಗಿಸಲಿದೆ ಶಿಕ್ಷಣ ಆರೋಗ್ಯ ಸರಿಯಾದರೆ ಎಲ್ಲವೂ ಸರಿಹೋಗುತ್ತದೆ ಇವುಗಳ ಕಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಹಶಿಲ್ದಾರ್ ನಯನ, ಜಿಲ್ಲಾ ಆರೋಗ್ಯಧಿಕಾರಿ ಶ್ರೀನಿವಾಸ್, ಸೇರಿದಂತೆ ಅಧಿಕಾರಿಗಳು ಇದ್ದರು.
ಚಿತ್ರ : ಕೋಲಾರ ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಛೇರಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಶಾಸಕ ಕೊತ್ತೂರು ಮಂಜುನಾಥ್ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್