ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
ಗದಗ, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ರೈತರು ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಸಹಾಯ
ಪೋಟೋ


ಗದಗ, 31 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು,

ಆಸಕ್ತ ರೈತರು ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಪಡೆದು ದಿನಾಂಕ 18-09-2025 ರೊಳಗಾಗಿ ನಿಗದಿತ ಅರ್ಜಿ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು, ಆತ್ಮ ಯೋಜನೆ, ಗದಗರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande