ಬೆಂಗಳೂರು, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ ಬಿಜೆಪಿ ನಾಳೆ ಧರ್ಮಸ್ಥಳ ಚಲೋ ಮತ್ತು ಧರ್ಮಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಈ ಅಭಿಯಾನದಲ್ಲಿ 1 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಭಾಗವಹಿಸುವಿಕೆ ನಿರೀಕ್ಷಿಸಲಾಗಿದೆ. ಬೆಳಗ್ಗೆ ಪ್ರತಿ ಕ್ಷೇತ್ರದಿಂದ ಪೂಜೆ ಮಾಡಿಕೊಂಡು ಕಾರ್ಯಕರ್ತರು ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.
ಮೊದಲು ಮಂಜುನಾಥ ಸ್ವಾಮಿ ದರ್ಶನ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಬಳಿಕ ಮಧ್ಯಾಹ್ನ 2 ಗಂಟೆಗೆ ಬೃಹತ್ ಧರ್ಮಜಾಗೃತಿ ಸಮಾವೇಶ ನಡೆಯಲಿದೆ.
ಧರ್ಮಸ್ಥಳ ಮತ್ತು ಹೆಗ್ಗಡೆ ಅವರ ವಿರುದ್ಧ ಸುಳ್ಳು ಪ್ರಚಾರ ನಡೆಯುತ್ತಿದ್ದು, ಹಿಂದೂಗಳ ಅಸ್ಮಿತೆಗೆ ಧಕ್ಕೆ ತರುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂಬುದು ಬಿಜೆಪಿ ಒತ್ತಾಯಿಸಿದೆ.
ಸಮಾವೇಶದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಸರ್ಕಾರ ಎನ್ಐಎ ತನಿಖೆಗೆ ಒಪ್ಪದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಿಸಲಾಗುವುದು ಬಿಜೆಪಿ ಎಚ್ಚರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa