ಮೈಸೂರು, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಳ್ಳುತ್ತಿರುವ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ. ಯಾತ್ರೆ ಹೋದರೆ ಹೋಗಲಿ. ಎಸ್ ಐ.ಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ. ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್ ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ಬಿಜೆಪಿಯವರು ಕೂಡ ಇದನ್ನು ಸ್ವಾಗತಿಸಿದ್ದರು. ಈಗ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮ ಗೊತ್ತಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa