ಮೈಸೂರು, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಭಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು
ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ. ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ಧರ್ಮ ಧರ್ಮಾಂಧರು ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದರು.
ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆಯೇ ಹೊರತಾಗಿ ಜಾತ್ಯಾತೀತವಾಗಿ ಮಾತನಾಡುವುದಿಲ್ಲ. ಜನ ಸಾಹಿತ್ಯ ಸಮ್ಮೇಳನದಲ್ಲಿ ನಾನು ಮುಷ್ತಾಕ್ ಅವರು ಕನ್ನಡ ತಾಯಿಯ ಬಗ್ಗೆ ಗೌರವವಿಲ್ಲದೆ ಮಾತನಾಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ ಎಂದರು. ಬಿಜೆಪಿಯವರು ಕುಂಟು ನೆಪವನ್ನು ಹುಡುಕುತ್ತಿದ್ದಾರೆ ಎಂದರು.
ದನದ ಮಾಂಸ ತಿಂದು ಬರುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಇದೆಲ್ಲಾ ಢೋಂಗಿಗಳು ಮಾತನಾಡುವುದು, ಅವರು ಮಾತನಾಡುವುದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಎದೆಯ ಹಣತೆ ಭಾಷಾಂತರ ಮಾಡಿದ ದೀಪಾ ಭಾಸ್ತಿಯವರಿಗೂ ಅರಮನೆಯ ಮುಂದೆ ಗೌರವ ಸಲ್ಲಿಸಬೇಕಿತ್ತು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಸರ್ಕಾರ ಈಗಾಗಲೇ ದೀಪಾ ಭಾಸ್ತಿ ಹಾಗೂ ಭಾನು ಮುಸ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂಗಳನ್ನು ನೀಡಿ ಇಬ್ಬರನ್ನು ಸರ್ಕಾರ ಸನ್ಮಾನಿಸಿ, ಗೌರವಿಸಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa