ಕೊಪ್ಪಳ, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆಯ ಶ್ರೀ ಗಜಾನನ ಗೆಳೆಯರ ಬಳಗದಿಂದ ಗಣೇಶೋತ್ಸವದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ರೂಪಿಸುವ ಉದ್ದೇಶದ ಕೊಪ್ಪಳದ ಕೋಟ್ಯಧಿಪತಿ ಕಾರ್ಯಕ್ರಮವು ಸೆಪ್ಟೆಂಬರ್ 1 ಮತ್ತು 2 ರಂದು ಗಣೇಶೋತ್ಸವದ ವೇದಿಕೆಯಲ್ಲಿ ನಡೆಯಲಿದೆ.
ಈ ಕುರಿತು ಪ್ರಕಟಣೆ ನೀಡಿರುವ ಬಳಗದ ಅಧ್ಯಕ್ಷ ಬಸವರಾಜ ಕರುಗಲ್ ಅವರು, ಮೊದಲ ದಿನದ ಕಾರ್ಯಕ್ರಮವನ್ನು ಗವಿಶ್ರೀಗಳು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಧಾರವಾಡದ ಕ್ಲಾಸಿಕ್ ಸ್ಟಡಿ ಸರ್ಕಲ್ನ ಲಕ್ಷ್ಮಣ ಉಪ್ಪಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಸಮಾಜ ಸೇವಕ ವೆಂಕಟೇಶ ಬಾರಕೇರ, ಜೆಡಿಎಸ್ ಮುಖಂಡ ಸಿ.ವಿ.ಚಂದ್ರಶೇಖರ, ಬಿಜೆಪಿ ಮುಖಂಡ ಡಾ.ಬಸವರಾಜ ಕ್ಯಾವಟರ್, ಪ್ರಖ್ಯಾತ ವೈದ್ಯ ಡಾ.ಮಂಜುನಾಥ ಜಂತ್ಲಿ ಭಾಗವಹಿಸುವರು.
ವಿಜೇತರಿಗೆ ಒಂದು ಕೋಟಿ ಅಂಕ, ಪುಸ್ತಕ ಹಾಗೂ ನಗದು ಬಹುಮಾನ ನೀಡಲಾಗುವುದು. ಕಾರ್ಯಕ್ರಮ ವೀಕ್ಷಿಸಲು ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್